ಸುದ್ದಿಬಿಂದು ಬ್ಯೂರೋ‌ ವರದಿ (Digital News)
ವಿಜಯಪುರ: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ಎಂಬಂತೆ: ವಿಜಯಪುರದ ಕೆನರಾ ಬ್ಯಾಂಕ್ ನಲ್ಲಿ 53 ಕೋಟಿ ರೂ.ಮೌಲ್ಯದ ಚಿನ್ನ ಲೂಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ 52.26 ಕೋಟಿ ರೂ. ಮೌಲ್ಯದ 58 ಕೆಜಿ (ಅರ್ಧ ಕ್ವಿಂಟಲ್ ಗಿಂತ ಹೆಚ್ಚು) 976 ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನ ಮಾಡಿ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.

ಮೇ 23ರ ಸಂಜೆ 6 ಗಂಟೆಯಿಂದ 25ರ ಬೆಳಗ್ಗೆ 11.30ರ ಅವಧಿಯಲ್ಲಿ ಕೃತ್ಯ ಎಸಗಿರುವ ಶಂಕೆ ಇದೆ. ಕಳ್ಳರ ಪತ್ತೆಗೆ ಎಂಟು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಇದನ್ನೂ ಓದಿ