ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಜೂನ್ 17 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ ಅಲರ್ಟ್) ಘೋಷಣೆಯಾಗಿದ್ದು ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಇಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶಿಸಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರೆಡ್ ಅಲರ್ಟ್ ಸಮಯದಲ್ಲಿ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ ಅಂಕೋಲಾ ಕುಮಟಾ ಹೊನ್ನಾವರ ಭಟ್ಕಳ ತಾಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್:12 ರಂದು ಮಾತ್ರ ರಜೆ ಘೋಷಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ರಾಜ್ಯದ್ಯಂತ ತಲುಪುತದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ರಾಜಕೀಯ ಅಪಘಾತ, ಕಳ್ಳತನ, ಮಳೆ ಹಾನಿ, ಯಾವುದೇ ಕ್ರೈಂ ಸೇರಿ ಸುದ್ದಿಯಾಗುವ ವಿಚಾರಗಳು ಯಾವುದೇ ಇದ್ದರೂ 9916127361 ಈ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸಲಾಗುವುದು.

ಇದನ್ನೂ ಓದಿ