ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಾಳೆ ಜೂನ್ 25ರಂದು ಜಿಲ್ಲೆಯ ನಾಲ್ಕು ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರೀಯಾ ಆದೇಶಿಸಿದ್ದಾರೆ. ಹಳಿಯಾಳ, ದಾಂಡೇಲಿ, ಜೊಯಿಡಾ, ಯಲ್ಲಾಪುರ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.