ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಹವಮಾನ ಇಲಾಖೆ ನಾಳೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ‌ ಸುರಕ್ಷತಾ ದೃಷ್ಟಿಯಿಂದ‌ ಜೋಯಿಡಾ, ದಾಂಡೇಲಿ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.

ವಿದ್ಯಾರ್ಥಿಗಳ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜೋಯಿಡಾ, ದಾಂಡೇಲಿ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 26 ಮಾತ್ರ ರಜೆ ಘೋಷಿಸುವ ಬಗ್ಗೆ ಅದೇಶ ಮಾಡಿದೆ.ಸಾರ್ವಜನಿಕ ಶಿಕ್ಷಣ ಇಲಾಖೆ ಶಿರಸಿ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದ್ದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ :ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ‌ ದಾಳಿ