ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಕಾರಣ ಗುರುವಾರ ಸಂಜೆ ಒಟ್ಟೂ 33 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗಿದೆ.
ಇದರಲ್ಲಿ 21ಸಾವಿರ ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನಾ ಘಟಕದ ಮೂಲಕ ಹಾಗೂ ನಾಲ್ಕು ಕ್ರಸ್ಟ್ ಗೇಟುಗಳ ಮೂಲಕ 12 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಳಿನದಿ ಯೋಜನೆಯ ಎರಡನೇ ಹಂತವಾದ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮುಂಗಾರು ಜೋರಾಗಿದ್ದು, ಒಳಹರಿವಿನ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 30 ಮೀಟರ್ ತಲುಪಿದೆ. ಜಲಾಶಯಕ್ಕೆ ಆಗಮಿಸುತ್ತಿರುವ ಒಳಹರಿವಿನ ಪ್ರಮಾಣ 23,182 ಕ್ಯೂಸೆಕ್ ಆಗಿದೆ.
ಈ ಹಿನ್ನೆಲೆಯಲ್ಲಿ, ಅಣೆಕಟ್ಟಿನ ಕೆಳಭಾಗದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮಳೆಗಾಲದ ಅವಧಿಯಲ್ಲಿ ಯಾವುದೇ ಕ್ಷಣದಲ್ಲಿ ನೀರು ಹೊರ ಬಿಡುವ ಸಾಧ್ಯತೆ ಇರುವುದರಿಂದ, ಸುರಕ್ಷತಾ ದೃಷ್ಟಿಯಿಂದ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಪ್ರಾಣಿಗಳನ್ನು ಕೂಡ ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಶಿರಸಿ-ವಡ್ಡಿ ಘಟ್ಟ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಎಚ್ಚರಿಕೆ