ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲಾ ಪಂಚಾಯಿತಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ.

ಕಳೆದ 2023 ರಿಂದ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ಕಾರ್ಯ ನಿರ್ವಹಿಸಿದ ಅವರು ನರೇಗಾ ಯೋಜನೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಅಲ್ಲದೇ ಜಿಲ್ಲೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಪಿಡಿಒ ಗಳಿಗೆ ಪಿಡಿಒ ಆಫ್‌ದಿ ಮಂತ್ ಪ್ರಶಸ್ತಿ ನೀಡುವ ಮೂಲಕ ಉತ್ತಮ ಕೆಲಸಕ್ಕೆ ಉತ್ತೇಜನ ನೀಡಿದ್ದರು. ಇದೀಗ ಇರವ ಹುದ್ದೆಗೆ ಐಎಎಸ್ ಅಧಿಕಾರಿ ದಿಲೀಶ್ ಸಸಿ ಅವರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ರೇಬೀಸ್ ಹೋರಿಯಿಂದ ರಂಪಾಟ: ವ್ಯಕ್ತಿಗೆ ತಿವಿತ