ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ:ಭಟ್ಕಳ ನಗರವನ್ನು 24 ಗಂಟೆಗಳೊಳಗೆ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಘಟನೆ ಆತಂಕ ಮೂಡಿಸಿದ್ದು, ಭಟ್ಕಳ ಶಹರ ಠಾಣೆ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ..
ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿಯ ಹೆಸರಿನಲ್ಲಿ kannnannandik@gmail.com ಇ-ಮೇಲ್ ವಿಳಾಸದಿಂದ ಜುಲೈ 10 ರಂದು ಬೆಳಗ್ಗೆ 7.24 ಕ್ಕೆ, ಭಟ್ಕಳ ಶಹರ ಠಾಣೆಯ ಅಧಿಕೃತ ಈಮೇಲ್ ವಿಳಾಸ bhatkaltownkwr@ksp.gov.in ಗೆ ಇಬ್ಬರು ಇ-ಮೇಲ್ ಸಂದೇಶಗಳನ್ನು ಕಳುಹಿಸಿ ಭಯೋತ್ಪಾದಕ ಬೆದರಿಕೆ ಹಾಕಿದ್ದಾರೆ..
ಈ ಬೆದರಿಕೆಯ ಇ-ಮೇಲ್ಗಳ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಭಟ್ಕಳ ಶಹರ ಪೊಲೀಸರು ಎಚ್ಚರಗೊಂಡಿದ್ದು, ಸ್ಥಳೀಯ ಹಾಗೂ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದ ಸಹಕಾರದೊಂದಿಗೆ ಭಟ್ಕಳ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ಬಗ್ಗೆ ಭಟ್ಕಳ ಶಹರ ಠಾಣೆಯ ಪಿಎಸ್ಐ ನವೀನ್ ನಾಯ್ಕ್ ಅವರ ನೇತೃತ್ವದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈಮೇಲ್ ಕಳುಹಿಸಿದ ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿಯ ವಿರುದ್ಧ ತನಿಖೆ ಆರಂಭಿಸಿದ್ದಾರೆ..
ಈ ಬಗ್ಗೆ ಸಾರ್ವಜನಿಕರಿಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಯಾವುದೇ ಸಂಶಯಾಸ್ಪದ ಚಟುವಟಿಕೆಯನ್ನು ಗಮನಿಸಿದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಅತ್ತೆಯ ಹತ್ಯೆಗೆ ಕಾರಣನಾದ ಅಳಿಯ: ಪತ್ನಿಯಿಂದ ಪತಿಯ ವಿರುದ್ಧ ದೂರು..!