ಸುದ್ದಿಬಿಂದು ಬ್ಯೂರೋ ವರದಿ
ಸಾಗರ: ತಾಲೂಕಿನ ಆನಂದಪುರ ಬಳಿಯ ಮುಂಬಾಳು ಬಳಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರೂ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಆನಂದಪುರದಿಂದ ಸಾಗರ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಆನಂದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :”ನಗರ ಯೋಜನೆ ವಿಭಾಗದ ನೂತನ ಸಹಾಯಕ ನಿರ್ದೇಶಕರಾಗಿ ವಿನಾಯಕ ನಾಯ್ಕ ನೇಮಕ”