ಸುದ್ದಿಬಿಂದು ಬ್ಯೂರೋ‌ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ‌ ಇಂದು 17ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಕುಮಟಾ ತಾಲ್ಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಡಳಿತದಿಂದ ಇಂದು ಆದೇಶ ಹೊರಡಿಸಲಾಗಿದೆ. ತಹಶೀಲ್ದಾರರಿಂದ ಬಂದಿರುವ ಮೌಖಿಕ ಕೋರಿಕೆ, ಹವಾಮಾನ ಇಲಾಖೆ ಬೆಂಗಳೂರು ನೀಡಿರುವ “ಆರೆಂಜ್ ಅಲರ್ಟ್” ಹಾಗೂ ಮಕ್ಕಳ ಸುರಕ್ಷತೆಯನ್ನು ದೃಷ್ಟಿಯಿಂದ ಈ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 34(ಎಮ್) ರ ಪ್ರಕಾರ ನೀಡಲಾದ ಅಧಿಕಾರದಡಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದ ಆದೇಶದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಆದೇಶವನ್ನು ಕಟ್ಟು ನಿಟ್ಟಾಗಿ ಅನುಸರಿಸಿ, ತದನಂತರ ಅವಶ್ಯಕವಾದ ತರಗತಿಗಳನ್ನು ಹೊಂದಾಣಿಕೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ:ಪತ್ನಿಯರ ಕೈಯಲ್ಲಿ ಪತಿಯ ಕೊಲೆ