ಸುದ್ದಿಬಿಂದು ಬ್ಯೂರೋ ವರದಿ

ಕುಮಟಾ: ಅತೀ ವೇಗವಾಗಿ ಬಂದ ಕಾರು ಚಾಲಕನೋರ್ವ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದು ಕಾರಿನ ಮುಂಭಾಗ ನುಜ್ಜುಗುಜ್ಜಾಗಿ ಕಾರ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೆಗಡೆ ಕ್ರಾಸ್‌ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಕಾರು ಮತ್ತು ಲಾರಿ ಎರಡು ಸಹ ಅಂಕೋಲಾ ಕಡೆಯಿಂದ ಕುಮಟಾ ಕಡೆ ಚಲಿಸುತ್ತಿದ್ದು, ಹೆಗಡೆ ಕ್ರಾಸ್‌ ಬಳಿ ಬರುತ್ತಿದ್ದಂತೆ ಕಾರು ಚಾಲಕ ತನ್ನ ಕಾರನ್ನ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಕಾರು ಲಾರಿ ಒಳಗ್ಗೆ ನುಗ್ಗಿದೆ,ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಕಾರ ಚಲಿಸುತ್ತಿದ್ದ ವ್ಯಕ್ತಿಯ ತಲೆಗೆ ಗಾಯವಾಗಿದೆ. ತಕ್ಷಣ ಆತನಿಗೆ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ. ಲಾರಿ ಹಾಗೂ ಕಾರ ಚಾಲಕರು ಇಬ್ಬರೂ ರಾಜಿ ಸಂಧಾನದ ಮಾಡಿಕೊಂಡಿದ್ದಾರೆನ್ನಲಾಗಿದೆ. ಅಪಘಾತದ ಕಾರಣಕ್ಕೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ : ಇಂದು ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ