ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಇಮೇಲ್ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಹಾಕಲಾಗಿದೆ.
ಈ ಕುರಿತು ಮಾಜಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಅವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಕ್ಕೂ ಮುಂಚೆಯೇ, ದಿನಾಂಕ 24-06-2025ರಂದು ಹೆಗಡೆಗೆ ಈ ಬೆದರಿಕೆ ಇಮೇಲ್ ಬಂದಿದ್ದು, ನ್ಯಾಯಾಲಯದ ಅನುಮತಿ ಪಡೆದು ಇಂದು ಶೆಟ್ಟಿ ದೂರು ದಾಖಲಿಸಿದ್ದಾರೆ.
ಈ ಹಿಂದೆ ಸಹ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆ ಇದೆ.ನಿಗದಿತ ಎನ್‌ಸಿಪಿಆರ್ ಅಡಿಯಲ್ಲಿ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ದಿನಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ : ಪತ್ರಕರ್ತ ಪ್ರಮೋದ ಹರಿಕಾಂತ