ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶನಿವಾರ ಜಿಲ್ಲೆಯ ಕರಾವಳಿ ತಾಲೂಕಿನ ಐದು ತಾಲೂಕಿನ ಶಾಲಾ‌-ಕಾಲೇಜುಗಳ ಜೊತೆ ದಾಂಡೇಲಿ ಹಾಗೂ ಜೊಯೀಡಾ ತಾಲೂಕಿನ ಶಾಲಾ‌‌ ಕಾಲೇಜುಗಳಿಗೆ ರಜೆ‌ಘೋಷಣೆ‌ ಮಾಡಿ ಜಿಲ್ಲಾಧಿಕಾರಿ ಡಾ. ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ,

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ‌ ಜೊಯೀಡಾ, ದಾಂಡೇಲಿ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಮುಂದುವರಿದ ಮಳೆ ಹಾಗೂ ಹಲವೆಡೆ ಸಂಭವಿಸಿದ ಜಲಾವೃತ ಪರಿಸ್ಥಿತಿಯ ಹಿನ್ನಲೆಯಲ್ಲಿ ಈ ತಾತ್ಕಾಲಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಿಲ್ಲಾಡಳಿತದ ಈ ಕ್ರಮದಿಂದ ವಿದ್ಯಾರ್ಥಿಗಳ ಭದ್ರತೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಯ್ದುಕೊಳ್ಳುವುದು ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಉತ್ತರಕನ್ನಡದಲ್ಲಿ ರೆಡ್ ಅಲರ್ಟ್ : ಎಚ್ಚರಿಕೆ ಸೂಚನೆ