ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ತಾಲೂಕಿನ ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಕೇರಳ ನೊಂದಣಿಯ ಕಾರೊಂದು ಸ್ಕೂಟಿಯ ಹಿಂಬದಿಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ನಿಯಂತ್ರಣ ತಪ್ಪಿ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನ ತಲೆಗೆ ಗಂಭೀರವಾಗಿ ಗಾಯವಾಗಿರುವ ಕಾರಣ ಸ್ಥಳದಲ್ಲೇ ಪ್ರಜ್ಞೆ ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತವಾದ ತಕ್ಷಣ ಸ್ಥಳೀಯರು ಗಾಯಾಳುವನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ಆಸ್ಪತ್ರೆಗೆ ರವಾನಿಸಿದ್ದಾರೆ..
ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ..