ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಗುರುವಾರ ಉತ್ತರ ಕನ್ನಡ ಜಿಲ್ಲೆಯ ಹತ್ತು ತಾಲೂಕಿನ ಶಾಲಾ,ಕಾಲೇಜು, ಅಂಗನವಾಡಿಗಳಿಗೆ ರಜೆನೀಡಿ ಆದೇಶಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಅಗಷ್ಟ್ 28 ರಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯ ರೆಡ್ ಅಲರ್ಟ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕಾರವಾರ,ಅಂಕೋಲಾ,ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ , ದಾಂಡೇಲಿ,ಜೊಯೀಡಾ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ನೀಡಿ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.