ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಸಿದ್ಧ ಬೆಣ್ಣೆ ಹೊಳೆ ಫಾಲ್ಸ್‌ನಲ್ಲಿ ವಿದ್ಯಾರ್ಥಿ ಒಬ್ಬರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿಯನ್ನು ಶಿರಸಿ ಅರಣ್ಯ ಮಹಾವಿದ್ಯಾಲಯದ ರಾಹುಲ್ ಎಂದು ಗುರುತಿಸಲಾಗಿದೆ. ರವಿವಾರ ರಜೆ ಹಿನ್ನೆಲೆಯಲ್ಲಿ ರಾಹುಲ್ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಫಾಲ್ಸ್‌ಗೆ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ತೀವ್ರವಾಗಿ ಹರಿದು ಹೋಗಿದ್ದು, ಅವರಲ್ಲಿ ಒಬ್ಬರನ್ನು ಸ್ಥಳೀಯರು ಹಾಗೂ ಸ್ನೇಹಿತರು ರಕ್ಷಿಸಿದ್ದಾರೆ. ಆದರೆ ರಾಹುಲ್ ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ರಾಹುಲ್ ಪತ್ತೆಗೆ ಶೋಧ ಕಾರ್ಯ ತೀವ್ರಗೊಳಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ :ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಆಚರಣೆ