ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ನಗರದ ಹೃದಯಭಾಗದಲ್ಲಿರುವ ಸುಭಾಷ್ ಸರ್ಕಲ್ ಬಳಿ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ನಡುರಸ್ತೆಯಲ್ಲೇ ಕೆಟ್ಟು ನಿಂತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರಿಗೆ ಭಾರಿ ತೊಂದರೆ ಉಂಟಾಗಿದೆ..

ತಾಂತ್ರಿಕ ಸಮಸ್ಯೆಯಿಂದಾಗಿ ಬಸ್ ಕೆಟ್ಟು ನಿಂತಿದ್ದು, ಸುಮಾರು ಅರ್ಥಗಂಟೆಗೂ ಹೆಚ್ಚು ಕಾಲ ನಗರದ ಮಧ್ಯಭಾಗದಲ್ಲೆ ಕೆಟ್ಟು ನಿಂತರು ಕೂಡ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ..ಇದರಿಂದಾಗಿ ಉಳಿದ ವಾಹನ ಸವಾರರು ಸರ್ಕಲ್ ಸುತ್ತುವರೆಯಲು ಸಮಸ್ಯೆ ಎದುರಿಸುವಂತಾಗಿದೆ.

ಬಸ್ ಕೆಟ್ಟಿರುವ ಬಗ್ಗೆ ಡಿಪೋ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕೂಡಾ ತಕ್ಷಣದ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಪರಿಣಾಮ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.. ಪದೆಪದೆ ರಸ್ತೆ ಮಧ್ಯೆ ಬಸ್‌ಗಳು ಕೆಟ್ಟು ನಿಲ್ಲುತ್ತಿರುವುದು ವಾಯವ್ಯ ಸಾರಿಗೆ ಸಂಸ್ಥೆಯ ನಿರ್ವಹಣಾ ದೌರ್ಬಲ್ಯ ಎದ್ದು ಕಾಣಿಸುವಂತಾಗಿದೆ., ಈ ಬಗ್ಗೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ತರಕಾರಿ ತುಂಬಿದ ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ