ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ವಾಗ್ವಾದಕ್ಕೂ ಕಾರಣವಾಗಿದ್ದ ಜಾತಿ ಗಣತಿ ಸಮೀಕ್ಷೆ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಸಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಸಮೀಕ್ಷೆ ನಡೆಸುವಂತೆ ಒತ್ತಾಯಿಸಿ ವಕೀಲ ಕೆ.ಎನ್. ಸುಬ್ಬಾ ರೆಡ್ಡಿ ಹಾಗೂ ಇತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದ್ದು ವಿಚಾರಣೆ ಸೋಮವಾರಕ್ಕೆ ಮುಂದುಡಲಾಗಿದ್ದು, ಸಮಿಕ್ಷೆ ನಡೆಯೋದೆ ಡೌಟ್ ಎನ್ನಲಾಗುತ್ತಿದೆ..
ಈ ಸಂಬಂಧ ಹೈಕೋರ್ಟ್ನ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರ ವಿಭಾಗೀಯ ಪೀಠವು ಹಿಂದೂಳಿದ ವರ್ಗಗಳ ಇಲಾಖೆ ಹಾಗೂ ಕೇಂದ್ರ ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.ಸಮೀಕ್ಷೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.