ಪೊಟೋದ ಮೇಲೆ ಕ್ಲಿಕ್ ಮಾಡಿ ಲಿಂಕ್ ಓಪನ್ ಮಾಡಿ, ಅತೀ ಕಡಿಮೆ ಬೆಲೆಯಲ್ಲಿ ನಿಮ್ಮ‌ಕೈ ಸೇರಲಿದೆ ಸ್ಕೂಟಿ

ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 30ರಿಂದ ಅಕ್ಟೋಬರ್‌ 2ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಈ ಅವಧಿಯಲ್ಲಿ ಕರಾವಳಿ ಪ್ರದೇಶದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಇದೇ ವೇಳೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್‌ಗಳನ್ನು ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಹಾಗೂ ಕಡಲ ತೀರ ಪ್ರದೇಶದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.