ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಸೋಮವಾರ ತಡರಾತ್ರಿ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ರೂಪೇಶ್ ನಾಯ್ಕ ಎಂಬವರು ತಮ್ಮ ಡಸ್ಟರ್ ಕಾರಿನಲ್ಲಿ ಕುಮಟಾಕ್ಕೆ ತೆರಳುತ್ತಿದ್ದ ವೇಳೆ, ಚಾಲಕರ ನಿಯಂತ್ರಣ ತಪ್ಪಿ ಕಾರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ತಡೆಗೋಡೆಗೆ ಬಲವಾಗಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಜ್ವಾಲೆಗಳು ಆವರಿಸಿವೆ.

ಅದೃಷ್ಟವಶಾತ್ ಕಾರಿನಲ್ಲಿ ಇದ್ದ ಇಬ್ಬರು ತಕ್ಷಣ ಪಾರಾಗಿದ್ದು, ಯಾವುದೇ ಜೀವಹಾನಿ ಸಂಭವಿಸಲಿಲ್ಲ. ಮಾಹಿತಿ ದೊರಕಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಪೊಲೀಸ್ ವರ್ಗಾವಣೆಯಲ್ಲಿ ಗೊಂದಲ : ವಾಮಮಾರ್ಗ ಬಳಸಿ ಬಂದವರಿಗೆ ನ್ಯಾಯ: ಅಮಾಯಕರಿಗೆ ಅನ್ಯಾಯ.!