ಸುದ್ದಿಬಿಂದು ಬ್ಯೂರೋ ವರದಿ
ಧಾರವಾಡ : ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ, ಸಲೀಮ್ ಸೊನ್ನೆಖಾನ್ ಇಂದು ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ನಡೆಯುವ ಚುನಾವಣೆಗೆ ಕಾಂಗ್ರೇಸ್ ಟಿಕೇಟ್ ಗಾಗಿ ಅರ್ಜಿ ಸಲ್ಲಿಕೆ ಮಾಡಿದರು.
ಸಲೀಮ್ ಸೊನ್ನೆಖಾನ ಅವರು ಕಳೆದ 25 ವರ್ಷಗಳಿಂದ ಕಾಂಗ್ರೇಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದು, ಪಕ್ಷವನ್ನು ಕೆಳಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಅಲ್ಲದೇ ನಿರುದ್ಯೋಗಿ ಪದವೀಧರರಿಗೆ ಅನುಕೂಲ ಕಲ್ಪಿಸಿದ್ದಾರೆ.
ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ ಸ್ಪರ್ಧಿಸಲು ಕಳೆದ ಒಂದು ವರ್ಷದಿಂದ ತಯಾರಿ ನಡೆಸಿದ್ದಾರೆ. ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮದೇ ಆದ ಗೆಳೆಯರ ಬಳಗ ಹಾಗೂ ಅಭಿಮಾನಿಗಳನ್ನು ಹೊಂದಿರುವ ಡಾ, ಸಲೀಮ್ ಸೊನ್ನೆಖಾನ ಕಾಂಗ್ರೇಸ್ ಪಕ್ಷ ಟಿಕೇಟ್ ಕೊಟ್ಟಲ್ಲಿ ಗೆಲವು ತಂದು ಕೊಡುವ ಸಾಮರ್ಥ್ಯ ಹೊಂದಿರುವದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೇಸ್ ಅಧ್ಯಕ್ಷ ಅಲ್ತಾಪ್ ಹಳ್ಳೂರಗೆ ಅರ್ಜಿ ಸಲ್ಲಿಸಿದ ಡಾ, ಸಲೀಮ್ ಸೊನ್ನೆಖಾನ ಅವರು ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಅಲೀಮ್ ಪಠಾಣ, ಮೆಹಬೂಬ ರಾಮದುರ್ಗ, ಇಸಾಖ ತಮಟಗಾರ, ಎಸ್ ಎಸ್ ಸೌದಾಗರ, ದಸ್ತಗಿರ ತರಡೆ, ಬಸವರಾಹ ಗೂಳ್ಳೋಳ್ಳಿ, ಚೇತನ ಆಚಾರ್ಯ, ದಾವಲಸಾಬ ನಾಡಮ್ಮನವರ, ಮಾಜ ಮುಜಾವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕೆಜಿ ಲೆಕ್ಕಾಚಾರದಲ್ಲಿ ಬಟ್ಟೆ ಮಾರಾಟ : ಖರೀದಿಗೂ ಮುನ್ನ ಯೋಚಿಸಿ.