ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಗೆ ಅಚ್ಚರಿ ತಿರುವು ಬಂದಿದೆ. ಶೋ ಆರಂಭವಾಗಿ ಕೇವಲ ಒಂದು ವಾರ ಕಳೆದಿರುವ ವೇಳೆಯಲ್ಲೇ, ಕಾರ್ಯಕ್ರಮ ನಡೆಯುತ್ತಿದ್ದ ಸ್ಟುಡಿಯೋಗೆ ಬೀಗ ಹಾಕಲಾಗಿದೆ ಎಂಬ ಸುದ್ದಿ ಹೊರಬಿದ್ದಿದೆ.

ರಾಮನಗರದ ಹತ್ತಿರದ ಸ್ಟುಡಿಯೋ ಪ್ರದೇಶದಲ್ಲಿ ಕೆಲವು ಆಡಳಿತಾತ್ಮಕ ಹಾಗೂ ತಾಂತ್ರಿಕ ಅಸಮಾಧಾನಗಳ ಹಿನ್ನೆಲೆಯಲ್ಲಿ ಶೂಟಿಂಗ್ ನಿಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಅಧಿಕೃತವಾಗಿ ಚಾನೆಲ್ ಅಥವಾ ನಿರ್ಮಾಣ ತಂಡದಿಂದ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲದಿದ್ದರೂ,ಸೆಟ್‌ನ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ರಜೆ ನೀಡಲಾಗಿದೆ ಎನ್ನಲಾಗಿದೆ.

ಶೋ ಅಭಿಮಾನಿಗಳು ಈ ಬೆಳವಣಿಗೆಗೆ ಅಚ್ಚರಿಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ “ಬಿಗ್ ಬಾಸ್ ಮನೆಗೆ ಏನಾಯ್ತು?”, “ಕಾಂಟೆಸ್ಟೆಂಟ್‌ಗಳು ಎಲ್ಲಿದ್ದಾರೆ?” ಎಂಬ ಚರ್ಚೆಗಳು ಭಾರೀ ಪ್ರಮಾಣದಲ್ಲಿ ನಡೆಯುತ್ತಿವೆ.

ಇದನ್ನೂ ಓದಿ: 105 ವರ್ಷಗಳ ಬಳಿಕ ಕೆಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲಿ ದಿಟ್ಟ ಮಹಿಳೆಯ ಹೊಸ ಅಧ್ಯಾಯ