ಸುದ್ದಿಬಿಂದು ಬ್ಯೂರೋ ವರದಿ
Karwar/ಕಾರವಾರ : ಸಾರ್ವಜನಿಕರ ಬೇಡಿಕೆಗೆ ಸರ್ಕಾರ ಸ್ಪಂದಿಸದೆ ಇದ್ದಾಗ ಬಿಜೆಪಿ ರಾಜ್ಯ ಉಪಾಧ್ಯಕ್ಷೆ
ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ವೈಯಕ್ತಿಕವಾಗಿ ತಮ್ಮ ಸ್ವಂತ ಹಣದಿಂದ ಅವರ್ಸಾ ಹಾಗೂ ಹಾರವಾಡ ಗ್ರಾಪಂ ವ್ಯಾಪ್ತಿಯಲ್ಲಿ ರುದ್ರಭೂಮಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ.ನಾಯ್ಕ, ಅವರು ಈ ಭಾಗದಲ್ಲಿ ರುದ್ರಭೂಮಿ ನಿರ್ಮಿಸಬೇಕು ಎನ್ನುವುದು ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿತ್ತು. ಆದರೆ ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿಲ್ಲ.ಯಾವುದೆ ವ್ಯವಸ್ಥೆಯನ್ನೂ ಮಾಡಿರಲಿಲ್ಲ. ಇದು ನನ್ನ ಗಮನಕ್ಕೆ ಬರುತ್ತಿದ್ದಂತೆ ವೈಯಕ್ತಿಕವಾಗಿ ನಿರ್ಮಾಣ ಮಾಡಿಕೊಡುವ ಸಂಕಲ್ಪ ಮಾಡಿ, ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಂಕೋಲಾ ಮಂಡಲದ ಮಾಜಿ ಅಧ್ಯಕ್ಷ ಸಂಜಯ ನಾಯ್ಕ, ಕಾರ್ಯದರ್ಶಿ ಶ್ರೀಧರ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ನಿಲೇಶ ನಾಯ್ಕ, ಹಾರವಾಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಂಜುನಾಥ ಠಾಕೇಕರ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಿಥುನ್ ನಾಯ್ಕ, ಶಿವಾ ನಾಯ್ಕ, ಮಾಹದೇವ ತಳೇಕರ, ರಾಜೇಶ್ ಈರಾ ನಾಯ್ಕ, ಶಾಂತೇಶ ನಾಯ್ಕ, ಸುಮತಿ ಕಾರ್ಯಕರ್ತರು ಹಾಗೂ ಗ್ರಾಮಸ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ/Raju Talikote Death: ಹೃದಯಾಘಾತಕ್ಕೆ ರಾಜು ತಾಳಿಕೋಟೆ ನಿಧನ