ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಉಡುಪಿ RTO ಅಧಿಕಾರಿಯಾದ ಹೊನ್ನಾವರ ತಾಲೂಕಿನ ಚಂದಾವರ ಮೂಲದ  ಎಲ್.ಪಿ. ನಾಯ್ಕ್ ಅವರ ಉಡುಪಿಯಲ್ಲಿರುವ ನಿವಾಸದ  ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿದೆ.

ಅಕ್ರಮ ಆಸ್ತಿ ಆರೋಪದ ಹಿನ್ನಲೆಯಲ್ಲಿ ನಡೆದ ಈ ದಾಳಿ ವೇಳೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಮೂಲದವರಾದ ಎಲ್.ಪಿ. ನಾಯ್ಕ್, ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (RTO) ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತರಿಗೆ ದೂರು ಇರುವ ಹಿನ್ನಲೆಯಲ್ಲಿ ಉಡುಪಿಯಲ್ಲಿರುವ ಅವರ ಮನೆ ಹಾಗೂ ಉತ್ತರ ಕನ್ನಡದಲ್ಲಿರುವ ಕೆಲ ಮಳಿಗೆಗಳ ಮೇಲೆ ಕೂಡ ಲೋಕಾಯುಕ್ತ ದಾಳಿ ನಡೆದಿದೆ.

ದಾಳಿಯಲ್ಲಿ ವಿವಿಧ ಆಸ್ತಿ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರಗಳು ಮತ್ತು ನಗದು ಕುರಿತು ಪರಿಶೀಲನೆ ಮುಂದುವರಿದಿದೆ. ಇನ್ನೂ ರಾಜ್ಯದ ಹಾವೇರಿ, ಬಾಗಲಕೋಟೆ ಸೇರಿದಂತೆ ಹಲವು ಕಡೆ ಬೇರೆ ಇಲಾಖೆಯ ಅಧಿಕಾರಿಗಳು ಹಾಗೂ ಉದ್ಯಮಿಗಳ‌ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸ್ವಂತ ಹಣದಿಂದ ರುದ್ರಭೂಮಿ ನಿರ್ಮಾಣಕ್ಕೆ ಚಾಲನೆ ನೀಡಿದ ರೂಪಾಲಿ ನಾಯ್ಕ