ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿದಿದ್ದು, ಕಾರವಾರ ತಾಲೂಕು ಸಹ ಅದರಿಂದ ಹೊರತಾಗಿಲ್ಲ. ಬೆಳಿಗ್ಗೆಯಿಂದಲೂ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತಹಶೀಲ್ದಾರರ ಮಾರ್ಗದರ್ಶನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಸುರಕ್ಷತೆಯನ್ನು ಮನನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದಿನ ರಜೆ ದಿನವನ್ನು ಮುಂದಿನ ಶೈಕ್ಷಣಿಕ ದಿನಗಳಲ್ಲಿ ಪೂರೈಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ/ಆರ್ಎಸ್ಎಸ್ ನಿಷೇಧ ಹೇಳಿಕೆ ಪ್ರಚಾರದ ತೆವಲು: ಪ್ರಿಯಾಂಕ ಖರ್ಗೆಗೆ ಹೇಳಿಕೆಗೆ ರೂಪಾಲಿ ನಾಯ್ಕ ತಿರುಗೇಟು



