ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ನೆನೆಗುದಿಗೆ ಬಿದ್ದಿದ್ದ ಸೀಬರ್ಡ ನಿರಾಶ್ರಿತರು 116 ಪ್ರಕರಣಗಳಲ್ಲಿ ಶುಕ್ರವಾರ 27,66,93,397 ಕೋಟಿ ರೂ. ಬಿಡುಗಡೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಾಕಿ ಉಳಿದಿರುವ ಪ್ರಕರಣಗಳಲ್ಲೂ ಶೀಘ್ರದಲ್ಲಿ ಪರಿಹಾರ ವಿತರಿಸಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ವಿಶ್ವಾಸ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.
ಈಗಾಗಲೆ ಬಾಕಿ ಇದ್ದ 256 ಪ್ರಕರಣಗಳಲ್ಲಿ ಮೊದಲ ಹಂತದಲ್ಲಿ 57 ಪ್ರಕರಣಗಳಿಗೆ 10 ಕೋಟಿ ರೂಪಾಯಿ ಭೂಮಾಲಕರ ಖಾತೆಗೆ ಜಮಾ ಮಾಡಲಾಗಿತ್ತು. ಶುಕ್ರವಾರ ಮತ್ತೆ 116 ಪ್ರಕರಣಗಳಲ್ಲಿ ಒಟ್ಟೂ 27, 66, 93, 397 ರೂಪಾಯಿ ಪರಿಹಾರದ ಹಣ ಬಿಡುಗಡೆಯಾಗಿದೆ. ಪರಿಹಾರ ಬಿಡುಗಡೆಗೆ ಕಾರಣರಾದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ರಕ್ಷಣಾ ಸಚಿವರಾದ ರಾಜನಾಥ ಸಿಂಗ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಇದಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ/ಕರಾವಳಿ ಉತ್ಸವಕ್ಕೆ ಅಧಿಕೃತ ಚಾಲನೆ : ಲೋಗೋ, ಪ್ರೋಮೋ ಬಿಡುಗಡೆಗೊಳಿಸಿದ ಸಚಿವ ಮಂಕಾಳ್ ವೈದ್ಯ


