ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಾಣಸಗೇರಿ ಗ್ರಾಮದ ಸಮೀಪ ಜೋಗನಕೊಪ್ಪ ಗ್ರಾಮದಿಂದ ಹಳಿಯಾಳ ಪಟ್ಟಣಕ್ಕೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬಸ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ರಕ್ಷಿಸಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಅಪಘಾತ ಮಾಹಿತಿ ಪಡೆದ ಹಳಿಯಾಳ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಗಾಯಾಳುಗಳನ್ನು ಬಸ್ನಿಂದ ಹೊರತೆಗೆದು ರಕ್ಷಣಾ ಕಾರ್ಯ ನಡೆಸಲಾಯಿತು.
ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರಿಗೆ ಹಳಿಯಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತಕ್ಕೆ ಚಾಲಕನ ನಿಯಂತ್ರಣ ತಪ್ಪಿರುವುದೇ ಕಾರಣ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹಳಿಯಾಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ/ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿನ ಕೈ ಚಾಚುವಂತೆ ಮನವಿ


