ಸುದ್ದಿಬಿಂದು ಬ್ಯೂರೋ ವರದಿ (suddibindu Digitaldigital News)
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಸಮೀಪ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿದ್ದ ಕಾರು ಹಾಗೂ ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನೊಳಗಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಊಟ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ, ಗಾಯಾಳುಗಳನ್ನು ಹೊರತೆಗೆದರೂ ನಾಲ್ವರು ಪ್ರಾಣ ಉಳಿಸಿಕೊಳ್ಳಲಾಗಲಿಲ್ಲ.
ಸ್ಥಳಕ್ಕೆ ಹಿರಿಯೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




