ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ: ಧಾರವಾಡ ಕಮಲಾಪುರದ ಶಾಲೆಯಿಂದ ಅಪಹರಣಕ್ಕೊಳಗಾದ ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಬಳಿ ಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅಪಹರಣ ಮಾಡಿದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.

ಮಧ್ಯಾಹ್ನ ಊಟಕ್ಕೆಂದು ಮಕ್ಕಳನ್ನು ಹೊರಗಡೆ ಬಿಟ್ಟಾಗ ಬೈಕ್ ಸವರನೋರ್ವ ಲಕ್ಷ್ಮೀ ಕರಿಯಪ್ಪನವರ ಹಾಗೂ ತನ್ವೀರ್ ದೊಡಮನಿ ಎಂಬ ಮೂರನೇ ತರಗತಿ ಮಕ್ಕಳನ್ನು ಪುಸಲಾಯಿಸಿ ತನ್ನ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಈ ಮಕ್ಕಳನ್ನು ಬೈಕ್ ಮೇಲೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಜೋಯಿಡಾ ಬಳಿ ಆತನ ಬೈಕ್ ಅಪಘಾತಕ್ಕೀಡಾಗಿದೆ. ಇದರಿಂದ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಮಕ್ಕಳನ್ನು ವಿಚಾರಣೆ ನಡೆಸಿದಾಗ ಆ ಮಕ್ಕಳು ಧಾರವಾಡದವರೆಂದು ಹೇಳಿದ್ದರಿಂದ ಅಪಹರಣಕ್ಕೊಳಗಾಗಿದ್ದ ಮಕ್ಕಳು ಇದೀಗ ಪೊಲೀಸರ ಸುಪರ್ದಿಗೆ ಸಿಕ್ಕಿವೆ. ಅಪಹರಣ ಮಾಡಿರುವ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ/BigBig Breaking/ಬ್ಯಾಂಕ್ ಆಫ್ ಬರೋಡಾ ಶಾಖೆಗೆ ದರೋಡೆ ಯತ್ನ