ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ದಾಂಡೇಲಿಯಿಂದ ಹಳಿಯಾಳಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಅಗ್ನಿಶಾಮಕ‌ದಳದ ಇಬ್ಬರು ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಳಿಯಾಳ ತಾಲೂಕಿನ ಗಡಿಭಾಗದ ಅಜಗಾಂವ ಬಳಿ ನಡೆದಿದೆ.

ಅಪಘಾತದಲ್ಲಿ ಸುಧಾಕರ್ ಗೌಡ ಹಾಗೂ ಮುಳಿಸುರತ್ ಶೆಟ್ಟಿ ಎಂಬವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಇಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ.
ಘಟನೆಯ ಬಳಿಕ ಗಾಯಾಳುಗಳನ್ನು ತಕ್ಷಣ ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹಳಿಯಾಳ ಪೊಲೀಸರು, ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.