ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ :ಮಿರ್ಜಾನ ಗ್ರಾಮ ಪಂಚಾಯತ ವ್ಯಾಪ್ತಿಯ ಖಂಡಗಾರ ಗ್ರಾಮದಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಎಸೆಗಿದ್ದ ಆರೋಪದ ಮೇಲೆ ನಾಗರಾಜ ನಾಯಕ ಎಂಬಾತನನ್ನ ಕುಮಟಾ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಾಲಕ ನಾಗರಾಜ ನಾಯಕ ಎಂಬಾತನ ಮೇಲೆ ಕಳೆದ ಮೂರನಾಲ್ಕು ದಿನಗಳ ಹಿಂದೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು,
ಬಾಲಕಿಯು ಶಾಲೆಯ ತರಗತಿ ಮುಗಿಸಿಕೊಂಡು ಮನೆಗೆ ಹೋಗುವುದಕ್ಕಾಗಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ನಾಗರಾಜ ನಾಯಕ ಬಾಲಕಿಯನ್ನು ಪುಸಲಾಯಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಕುರಿತು ಬಾಲಕಿ ಮನೆಗೆ ತೆರಳಿ ಪಾಲಕರಿಗೆ ವಿಷಯ ತಿಳಿಸಿದ್ದಾಳೆ. ತಕ್ಷಣ ಬಾಲಕಿಯ ತಾಯಿ ಕುಮಟಾ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ .


