ಸುದ್ದಿಬಿಂದು ಬ್ಯೂರೋ ವರದಿ
ಉತ್ತರ ಕನ್ನಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಪರವಾಗಿ ಪ್ರಚಾರ ಕಾರ್ಯ ಚುರುಕುಗೊಂಡಿದೆ. ರಾಜ್ಯ ಬಿಜೆಪಿ ಮಹಿಳಾ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ್ ಅವರ ನೇತೃತ್ವದಲ್ಲಿ ಕಾರವಾರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭರ್ಜರಿ ಮತಯಾಚನೆ ನಡೆಸಲಾಗುತ್ತಿದೆ.

ಚುನಾವಣಾ ಪ್ರಚಾರದ ಅಂಗವಾಗಿ ಪದವೀಧರ ಮತದಾರರನ್ನು ಸಂಪರ್ಕಿಸುತ್ತಿರುವ ರೂಪಾಲಿ ನಾಯ್ಕ್ ಹಾಗೂ ಬಿಜೆಪಿ ಮುಖಂಡರು, ಸಂಕನೂರು ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಕ್ಷೇತ್ರದಾದ್ಯಂತ ಮತದಾರರನ್ನು ತಲುಪುವ ಉದ್ದೇಶದಿಂದ ಪ್ರಚಾರ ಕಾರ್ಯ ಚುರುಕು ನೀಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕಿ ರೂಪಾಲಿ ನಾಯ್ಕ್, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಪದವೀಧರ ಮತದಾರರು ಬೆಂಬಲ ನೀಡಬೇಕು ಎಂದು ಮನವಿ‌ಮಾಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆಯುತ್ತಿರುವ ಮತಯಾಚನೆ ಮೂಲಕ ಬಿಜೆಪಿ ಅಭ್ಯರ್ಥಿಯ ಪರವಾಗಿ ಬೆಂಬಲಕ್ಕೆ ರೂಪಾಲಿ ನಾಯ್ಕ ಸೇರಿ ಪಕ್ಷದ ಮುಖಂಡರು ಮುಂದಾಗಿದ್ದಾರೆ. ಚುನಾವಣೆಯ ದಿನ ಸಮೀಪಿಸುತ್ತಿರುವಂತೆ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ. ಸಂಕನೂರು ಗೆಲುವಿಗಾಗಿ ರೂಪಾಲಿ ನಾಯ್ಕ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ.

ಇದನ್ನೂ ಓದಿ/ಬರ್ಗಿಯಲ್ಲಿ 20ನೇ ವರ್ಷದ ಶಾರದೋತ್ಸವ ಸಂಭ್ರಮ: ಭಜನೆ, ರಸಮಂಜರಿ, ಯಕ್ಷಗಾನಕ್ಕೆ ಮನಸೋತ ಜನತೆ