ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ತಾಲೂಕಿನ ಗೋಕರ್ಣದ ದುಬ್ಬಣಶಶಿ ಕಡಲತೀರದಲ್ಲಿ ಸಮುದ್ರದ ಭಾರಿ ಅಲೆಗೆ ಸಿಲುಕಿ ಮೂವರು ಪ್ರವಾಸಿಗರು ಮೃತಪಟ್ಟಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಪತ್ತೆಯಾಗಿದ್ದ ಮತ್ತೊಬ್ಬ ಯುವಕನ ಮೃತದೇಹ ಪತ್ತೆಯಾಗಿದೆ.
ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಅಲೋರಿಯಾ ಇಕೋಸ್ಪೇಸ್ ಕಂಪನಿಯ 16 ಮಂದಿ ಉದ್ಯೋಗಿಗಳ ತಂಡ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿದ್ದರು. ಈ ವೇಳೆ ದುಬ್ಬಣಶಶಿ ಕಡಲತೀರದಲ್ಲಿ ಸಮುದ್ರಕ್ಕೆ ಇಳಿದಿದ್ದ ತಂಡದ ಐವರು ಭಾರಿ ಅಲೆಗೆ ಸಿಲುಕಿ ನೀರಿನಲ್ಲಿ ಕೊಚ್ಚಿಹೋಗಿದ್ದರು.
ಘಟನೆ ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರವಾಸಿಗರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಉಳಿದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಮೃತರನ್ನು ಶೋಭಾ (22), ಮಹಮ್ಮದ್ ಅಕ್ರಮ್ ಹಾಗೂ ವಿಶ್ವ (24) ಎಂದು ಗುರುತಿಸಲಾಗಿತ್ತು. ಈ ಪೈಕಿ ವಿಶ್ವ (24) ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿತ್ತು.
ಇದೀಗ ಆತನ ಮೃತದೇಹ ಪತ್ತೆಯಾಗಿದ್ದು, ಘಟನೆಯಲ್ಲಿ ಮೃತಪಟ್ಟ ಮೂವರೂ ಪ್ರವಾಸಿಗರ ಮೃತದೇಹಗಳು ಪತ್ತೆಯಾದಂತಾಗಿದೆ. ಘಟನೆಗೆ ಸಂಬಂಧಿಸಿದಂತೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

