ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಅವರು ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಶುಭಾಶಯ ಸಂದೇಶ ನೀಡಿರುವ ಅವರು, ಯುವಶಕ್ತಿಯ ಸ್ಪೂರ್ತಿಯಾಗಿ, ಕಾರ್ಯಕರ್ತರ ಆತ್ಮವಿಶ್ವಾಸದ ಶಕ್ತಿಯಾಗಿ ಹಾಗೂ ತಮ್ಮ ಸಂಘಟನಾ ಸಾಮರ್ಥ್ಯ ಮತ್ತು ನಾಯಕತ್ವದ ಗುಣಗಳ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಹೊಸ ಚೈತನ್ಯ ತುಂಬುತ್ತಿರುವ ವಿಜಯೇಂದ್ರ ಅವರ ರಾಜಕೀಯ ಪಯಣ ಮತ್ತಷ್ಟು ಉನ್ನತ ಸ್ಥಾನಕ್ಕೇರಲಿ ಎಂದು ಹಾರೈಸಿದ್ದಾರೆ.
ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವ ಅವರ ಛಲ,ಪಕ್ಷದ ಸಂಘಟನೆಗೆ ನೀಡುತ್ತಿರುವ ಕೊಡುಗೆ ಹಾಗೂ ಜನಸೇವೆಯ ಬದ್ಧತೆ ನಾಡಿನ ಯುವ ಸಮುದಾಯಕ್ಕೆ ಸದಾ ಪ್ರೇರಣೆಯಾಗಲಿ.ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಅಪಾರ ಯಶಸ್ಸು ಲಭಿಸಲಿ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ರೂಪಾಲಿ ಎಸ್. ನಾಯ್ಕ ಶುಭ ಹಾರೈಸಿದ್ದಾರೆ.
ಅವರ ಸಮರ್ಥ ನಾಯಕತ್ವದಲ್ಲಿ ನಾಡಿನ ಅಭಿವೃದ್ಧಿ ಹಾಗೂ ಭಾರತೀಯ ಜನತಾ ಪಕ್ಷದ ಸಂಘಟನೆ ಹೊಸ ಎತ್ತರಕ್ಕೆ ತಲುಪಲಿ ಎಂದು ಅವರು ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.

