ಸುದ್ದಿಬಿಂದು ಬ್ಯೂರೋ ವರದಿ
ಜೊಯಿಡಾ: ಗೋವಾದಿಂದ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 1.20 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಮೂಲದ ಲಾರಿಯನ್ನು ವಶಕ್ಕೆ ತೆಗೆದುಕೊಂಡು ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಅಬಕಾರಿ ಇಲಾಖೆಯ ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ತಮಿಳುನಾಡು ನೋಂದಣಿಯ ಲಾರಿಯನ್ನು ತಪಾಸಣೆ ನಡೆಸಿದಾಗ, ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಆರೋಪಿ ಅಕ್ರಮ ಮದ್ಯ ಸಾಗಾಟಕ್ಕಾಗಿ ಲಾರಿಯಲ್ಲಿ ವಿಶೇಷ ಕಂಪಾರ್ಟ್ಮೆಂಟ್ ನಿರ್ಮಿಸಿಕೊಂಡಿದ್ದ ಎನ್ನಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಈ ರಹಸ್ಯ ವಿಭಾಗದಲ್ಲಿ ಸಂಗ್ರಹಿಸಿಟ್ಟಿದ್ದ 267 ಲೀಟರ್ ಗೋವಾ ಮದ್ಯ ಪತ್ತೆಯಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 1.20 ಲಕ್ಷ ರೂ. ಎಂದು ತಿಳಿದುಬಂದಿದೆ.
ಅಬಕಾರಿ ಸಿಬ್ಬಂದಿ ಮದ್ಯವನ್ನು ವಶಕ್ಕೆ ಪಡೆದು, ಲಾರಿಯನ್ನು ಜಪ್ತು ಮಾಡಿಕೊಳ್ಳಲಾಗಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ..
J oida Liquor Seizure, Goa Liquor Smuggling, Illegal Liquor Transportation, Excise Department Raid, Anmod Check Post, Uttara Kannada News, Tamil Nadu Truck Seized, Goa Alcohol Smuggling, 267 Litres Liquor Seized, Karnataka Excise Department
joida-illegal-goa-liquor-seized-267-litres-truck
ಜೊಯಿಡಾದ ಅನಮೋಡ್ ಚೆಕ್ಪೋಸ್ಟ್ನಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ, ತಮಿಳುನಾಡು ಮೂಲದ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 267 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದೆ. 1.20 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿ, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

