ಅಂಕೋಲಾ : ವಿಷ ಸೇವಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಓರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಂಬರ ದ ತಾಳೇಬೈಲಿನಲ್ಲಿ ನಡೆದಿದೆ.
ಶಿಲ್ಪ ಗೌಡ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಅಂಕೋಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು.
ಯಾವುದೊ ಒಂದು ವಿಚಾರಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿಷ ಸೇವಿಸಿದ್ದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷ ಸೇವಿದ ವಿಷಯ ತಿಳಿದ ಕುಟುಂಬಸ್ಥರು ವಿದ್ಯಾರ್ಥಿನಿಯನ್ನ ತಕ್ಷಣ ಕಾರವಾರ ಕ್ರಿಮ್ಸ್ ಗೆ ದಾಖಲಿಸಿದ್ದರು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.
ಈ ಬಗ್ಗೆ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.