ಸುದ್ದಿಬಿಂದು ಬ್ಯೂರೋ
ಕುಮಟಾ : ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ಡಿಸೆಂಬರ್ 10ರಂದು,ಭಾನುವಾರದಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ನವೆಂಬರ್ 30 ಗುರುವಾರ, ಕುಮಟಾದ ನಾಮಧಾರಿ ಸಭಾಭವನದಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.

ಈ ಸಭೆಗೆ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡರು ಮತ್ತು ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಆಗಮಿಸಿಲಿದ್ದಾರೆ.

ಇದೇ ಸಂದರ್ಭ ಕುಮಟಾ ನಾಮಧಾರಿ ಸಂಘ ಮತ್ತು ವಿವಿಧ ಸಂಘಟನೆಗಳಿಂದ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕು ಎಂದು ಕುಮಟಾ ನಾಮಧಾರಿ ಸಂಘದ ಅಧ್ಯಕ್ಷರಾದ ಮಂಜುನಾಥ ನಾಯ್ಕ ಕೋರಿದ್ದಾರೆ.