fishermen Kidnapping
suddibindu.in
Mangalore News :ಮಂಗಳೂರು : ಮಲ್ಪೆಯಲ್ಲಿ ನಡೆದ ಮೀನುಗಾರರ ಅಪಹರಣ( fishermen Kidnapping) ಪ್ರಕರಣಕ್ಕೆ ಸಂಬಂಧಿಸಿ ಇದೀಗ ಉತ್ತರಕನ್ನಡ ಜಿಲ್ಲೆಯ ಭಟ್ಕಳದ (Bhatkala,)7ಮಂದಿ ಆರೋಪಿಗಳನ್ನ ಮಲ್ಪೆ( Malpe) ಪೊಲೀಸರು ಬಂಧಿಸಿದ್ದಾರೆ.
- ಅಪಘಾತ ನಿಯಂತ್ರಣಕ್ಕೆ ಕುಮಟಾದಲ್ಲಿ ಬಿಗ್ ಆಕ್ಷನ್ : ನಿಯಮ ಮೀರಿ ವಾಹನ ಓಡಿಸಿದ್ರೆ ಕಾನೂನು ಕ್ರಮ
- ಸುಗಮವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲು ಎಸ್ಪಿಗೆ ರೂಪಾಲಿ ನಾಯ್ಕ ಮನವಿ
- ದಿನಕರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ
ಭಟ್ಕಳದ ಸುಬ್ರಹ್ಮಣ್ಯ ಖಾರ್ವಿ, ರಾಘವೇಂದ್ರ ಖಾರ್ವಿ, ಹರೀಶ್ ನಾರಾಯಣ ಖಾರ್ವಿ, ನಾಗೇಶ್ ನಾರಾಯಣ, ಗೋಪಾಲ ಮಾದವ್, ಸಂತೋಷ ದೇವಯ್ಯ ಹಾಗೂ ಲಕ್ಷ್ಮಣ್ ಬಂಧಿತ ಆರೋಪಿಗಳಾಗಿದ್ದಾರೆ. ಆಳ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ 25ಮಂದಿ ಇದ್ದ ಮೀನುಗಾರಿಕಾ ಬೋಟ್ ಅಪಹರಿಸಿ ಲಕ್ಷಾಂತರ ರೂಪಾಯಿ ಮೀನು ಹಾಗೂ ಡಿಸೇಲ್ ದೋಚಲಾಗಿತ್ತು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಲ್ಪೆ ಪೊಲೀಸರು ಇದೀಗ ಭಟ್ಕಳ 7 ಮಂದಿ ಮೀನುಗಾರರನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕಾಗಿ ಶೋಧ ಮುಂದುವರೆಸಿದ್ದಾರೆ.
ಮಲ್ಪೆಯ ಚೇತನ್ ಸಾಲಿಯಾನ್ ಎಂಬವರ ಕೃಷ್ಣನಂದನ ಎಂಬ ಲೈಲಾನ್ ಬೋಟ್ನಲ್ಲಿ ಫೆ.19ರಂದು ಆಳ ಸಮುದ್ರಕ್ಕೆ ಮೀನುಗಾರಿಕೆಗಾಗಿ ನಾಗರಾಜ್ ಹರಿಕಾಂತ, ನಾಗರಾಜ್ ಎಚ್.ಹರಿಕಾಂತ, ಅರುಣ್ ಹರಿಕಾಂತ ಅಂಕೋಲ, ಅಶೋಕ ಕುಮುಟ, ಕಾರ್ತಿಕ್ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಮಣ್ಯ ಖಾರ್ವಿ ಎಂಬವರು ತೆರಳಿದ್ದರು.
ಫೆ.27ರಂದು ಮೀನುಗಾರಿಕೆ ಮುಗಿಸಿ ಲಕ್ಷಾಂತರ ರೂ. ಮೌಲ್ಯದ ಮೀನು ತುಂಬಿಸಿಕೊಂಡು ಮಲ್ಪೆಕಡೆಗೆ ಬರುತ್ತಿರುವಾಗ ಬೋಟ್ನ ಬಲೆ ಫ್ಯಾನ್ಗೆ ಬಿದ್ದು ಬೋಟ್ ಬಂದ್ ಆಗಿ ನಿಂತಿತ್ತೆನ್ನಲಾಗಿದೆ. ಈ ವೇಳೆ ಸುಮಾರು 25 ಜನ ಮಂದಿ ಅಕ್ರಮಣ ಮಾಡಿ ಬೋಟ್ನ್ನು ತೀರಕ್ಕೆ ಎಳೆದುಕೊಂಡು ಹೋಗಿ ಮೀನುಗಾರರನ್ನು ಅಪಹರಿಸಿ ಬೋಟ್ನಲ್ಲಿದ್ದ ಸುಮಾರು 8 ಲಕ್ಷ ಮೌಲ್ಯದ ಮೀನು ಮತ್ತು ಬೋಟ್ಗೆ ತುಂಬಿಸಿದ 5,76,700ರೂ. ಮೌಲ್ಯದ 7,500 ಲೀಟರ್ ಡೀಸೆಲ್ ದೋಚಿರುವ ಬಗ್ಗೆ ದೂರು ದಾಖಲಾಗಿತ್ತು.