Priests resolve to let DK Shivakumar become CM
suddibindu.in
ಕಾರವಾರ : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಅರ್ಚಕರಿಂದ ಸಂಕಲ್ಪ ಮಾಡಿದರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ ಇಂದು ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
- ಉತ್ತರ ಕನ್ನಡದಲ್ಲಿ ನಾಳೆ ಡಿಸಿಎಂ ಡಿಕೆ ಶಿವಕುಮಾರ್ ಏಕಾಂತ ಪೂಜೆ
- ಮಹಿಳಾ ಪೊಲೀಸ್ ಅಧಿಕಾರಿ ಕುತ್ತಿಗೆಯಿಂದ 60 ಗ್ರಾಂ ಚಿನ್ನ ಎಗರಿಸಿದ ಕಳ್ಳ
- ಕರಾವಳಿ ಉತ್ಸವ ಹಿನ್ನಲೆ ಡಿಸೆಂಬರ್ 24ರಂದು ರಂಗೋಲಿ ಸ್ಪರ್ಧೆ
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರ ಪ್ರಚಾರಕ್ಕೆ ಆಗಮಿಸಿದ ಡಿ ಕೆ ಶಿವಕುಮಾರ ಅವರು ಪ್ರಚಾರ ಸಭೆಯ ಪೂರ್ವದಲ್ಲಿ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ ಅರ್ಚಕರು ಡಿ.ಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ದೇವರ ಮುಂದೆ ಸಂಕಲ್ಪ ಮಾಡಿಕೊಂಡಿದ್ದಾರೆ ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ ಅರ್ಚಕರು ಹೇಳುವುದು ತಪ್ಪೇನಿಲ್ಲ.
ಇದನ್ನೂ ಓದಿ
ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ.ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ.ಯಾರು ಏನೇ ಆಸೆ ಪಟ್ಟರು ಪಕ್ಷ ಅಂತಿಮವಾಗಿ ತಿರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ





