suddibindu.in
ಕುಮಟಾ : ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ ಹಾಗೂ ಜೆಡಿಎಸ್ ನಾಯಕ ಸೂರಜ್ ನಾಯ್ಕ ಸೋನಿ ಇವರಿಬ್ಬರೂ ರಾಜಕೀಯವಾಗಿ ಬದ್ಧ ವೈರಿಗಳು. ಆದರೆ ಈ ಭಾರೀಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಯಾಗಿದ್ದು, ಈ ಕ್ಷೇತ್ರದಲ್ಲಿಯೂ ಸಹ ಬಿಜೆಪಿ-ಜೆಡಿಎಸ್ ಒಂದಾಗಿದೆ. ಈ ಇಬ್ಬರೂ ನಾಯಕರೂ ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಮಾವೇಶವೊಂದರಲ್ಲಿ ವೇದಿಕೆ ಹಂಚಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಬ್ಬರ ಕೈ ಹಿಡಿದು ಈ ಜೋಡಿ ಇದ್ದರೆ ತಮಗೆ ಗೆಲುವು ಸುಲಭ ಎನ್ನುವ ಹೊಸ ಸಂದೇಶ ಸಾರಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಹಾಲಿ ಶಾಸಕ ದಿನಕರ ಶೆಟ್ಟಿ ಹಾಗೂ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದ ಸೂರಜ್ ನಾಯ್ಕ ಸೋನಿ ಅವರ ನಡುವೆ ಸ್ಫರ್ಧೆ ನಡೆದು ಹಾಲಿ ಶಾಸಕ ದಿನಕರ ಶೆಟ್ಟಿ ಅವರಿಗೆ ಸೂರಜ್ ನಾಯ್ಕ ಸೋನಿ ಅವರ ಎದುರು ಕೇವಲ 600ಮತಗಳ ಅಂತರದಲ್ಲಿ ಗೆದ್ದು ಶಾಸಕರಾಗಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಆಗಿರುವುದರಿಂದ ಬಿಜೆಪಿಗೆ ಜೆಡಿಎಸ್ ಬೆಂಬಲ ಬೇಕಾಗಿದೆ. ಹೀಗಾಗಿ ಸ್ಥಳೀಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ಹೊಂದಾಣಿಕೆ ಇಲ್ಲದೆ ಹೋದರೂ ಸಹ ರಾಜ್ಯ ನಾಯಕರ ಸೂಚನೆಯಂತೆ ಮೈತ್ರಿಧತ್ಮ ಪಾಲಿಸುವುದು ಅನಿವಾರ್ಯವಾಗಿದೆ.
ಇದನ್ನೂ ಓದಿ
- ರೇಬೀಸ್ ಹೋರಿಯಿಂದ ರಂಪಾಟ: ವ್ಯಕ್ತಿಗೆ ತಿವಿತ
- 85 ಸಾವಿರ ನಗದು, ಚಿನ್ನ ಕದ್ದ ಆರೋಪಿ ಬಂಧನ
- ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್
ಹೀಗಾಗಿ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರ ಹಾಗೂ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಅವರು ಹೊಂದಾಣಿಕೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿರುವುದರಿಂದ ಇಂದು ಈ ಇಬ್ಬರೂ ನಾಯಕರು ಸಹ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವಂತಾಗಿದೆ ಎಂದು ಎರಡು ಪಕ್ಷದ ಕಾರ್ಯಕರ್ತರು ಆಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರಿಗೆ ಬೆಂಬಲ ನೀಡಲು ಜೆಡಿಎಸ್ ಸ್ಥಳೀಯವಾಗಿ ಒಂದಿಷ್ಟು ಷರತ್ತುಗಳನ್ನ ಹಾಕಿಯೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ಒಪ್ಪಿಕೊಂಡಿದೆ ಎನ್ನಲಾಗಿದೆ.