suddibindu.in
ಕಾರವಾರ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿ ಸಿ ಎಂ ಡಿ ಕೆ ಶಿವಕುಮಾರ ಅವರು ಮೇ 3ರಂದು, ನಾಳೆ ಉತ್ತರಕನ್ನಡ ಲೋಕಸಭಾ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರ ಪರ ಪ್ರಚಾರಕ್ಕಾಗಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ
ಮುಂಡಗೋಡಕ್ಕೆ ಬೆಳಿಗ್ಗೆ 11-30ಕ್ಕೆ ಹಾಗೂ ಸಂಜೆ 3.30ಕ್ಕೆ ಕುಮಟಾದ ಮಣಕಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಸಿ ಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಆಗಮಿಸಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಪರ ಪ್ರಚಾರ ನಡೆಸಲಿದ್ದಾರೆ.
ಇದನ್ನೂ ಓದಿ
- ಕೊಟ್ಟಿಗೆಯೊಳಗೆ ನುಗ್ಗಿದ ಚಿರತೆ : ರಕ್ತದ ಮಡಿಲಲ್ಲಿ ಎರಡು ಕರುಗಳ ಸಾವು
- ಗೋವಾಕ್ಕೆ ತೆರಳುತ್ತಿದ್ದ ಪ್ರವಾಸಿಗರ ವಾಹನ ಪಲ್ಟಿ : ಚಾಲಕ ಗಂಭೀರ
- ಕೆಡಿಸಿಸಿ ಬ್ಯಾಂಕ್ ಚುನಾವಣೆ ಶಿವರಾಮ ಹೆಬ್ಬಾರ್ ಎಚ್ಚರಿಕೆ ಹೆಜ್ಜೆ, ಮಂಕಾಳ ವೈದ್ಯರಿಗೆ ಅಧ್ಯಕ್ಷ ಸ್ಥಾನ ಸಾಧ್ಯತೆ
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ತೆರಳುತ್ತಿದ್ದಾರೆ. ಅದೇ ರೀತಿ ಜಿಲ್ಲೆಯ ನಾಯಕರು ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಕರಾವಳಿ ಭಾಗದಲ್ಲಿನ ಜನರಿಗಾಗಿ ಕುಮಟಾ ಹಾಗೂ ಘಟ್ಟದ ಮೇಲಿನ ತಾಲೂಕಿನ ಜನರಿಗಾಗಿ ಮುಂಡಗೋಡಿಗೆ ಆಗಮಿಸಲಿದ್ದಾರೆ .ಐದು ಗ್ಯಾರಂಟಿ ನೀಡಿದ ಸಿದ್ದರಾಮಯ್ಯನವರನ್ನ ನೋಡಲು ಜಿಲ್ಲೆಯ ಜನರು ಆಸಕ್ತಿಯಿಂದ ಇದ್ದು ಜಿಲ್ಲೆಯ ಘಟ್ಟದ ಮೇಲಿನ ಹಾಗೂ ಕರಾವಳಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.