suddibindu.in
ಬೆಂಗಳೂರು: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಮರು ನಿಯೋಜನೆ ಮಾಡಿ ರಾಜ್ಯ ಆದೇಶಿಸಿದೆ.
ಲೋಕಸಭೆ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ಹೇಮಂತ್ ನಿಂಬಾಳ್ಕರ್ ಅವರು ಮೂರು ತಿಂಗಳಿನಿಂದಲೂ ಯಾವುದೇ ಹುದ್ದೆಯಲ್ಲಿ ಇರಲಿಲ್ಲ. ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಅವರು ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗ ಮಾಡಲಾಗಿತ್ತು
ಈ ವರೆಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರೆಸಲಾಗಿದ್ದು, ಹೇಮಂತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ
- ಡಿ ಕೆ ಶಿವಕುಮಾರ ಪಿಎಸ್ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು
- ಉತ್ತರ ಕನ್ನಡದಲ್ಲಿ ನಾಳೆ ಡಿಸಿಎಂ ಡಿಕೆ ಶಿವಕುಮಾರ್ ಏಕಾಂತ ಪೂಜೆ
- ಮಹಿಳಾ ಪೊಲೀಸ್ ಅಧಿಕಾರಿ ಕುತ್ತಿಗೆಯಿಂದ 60 ಗ್ರಾಂ ಚಿನ್ನ ಎಗರಿಸಿದ ಕಳ್ಳ
ಹೇಮಂತ್ ನಿಂಬಾಳ್ಕರ್ ಅವರು ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ .ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು.







