suddibindu.in
Karwar: ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕರಾವಳಿ ಜಿಲ್ಲೆಯ ಮೂರು ತಾಲೂಕಿನಲ್ಲಿ ‌ಎಲ್ಲಾ ಶಾಲಾ-ಕಾಲೇಜಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲೆಯ ಕುಮಟಾ,ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಈ ಮೂರು ತಾಲೂಕಿನಲ್ಲಿನ ಎಲ್ಲಾ ನದಿ ಸೇರಿದಂತೆ ಹಳ್ಳ ಕೊಳ್ಳಗಳು ಅಪಾಯದ ಮಟ್ಟ ಮಿರಿ ಹರಿಯುತ್ತಿದ್ದು, ಇನ್ನೂ ಮೂರು ದಿನಗಳ ಕಾಲ‌ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ‌ಈ ಮೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಇದನ್ನೂ ಓದಿ