suddibindu.in
ಬಳ್ಳಾರಿ:ಪರಿಶಿಷ್ಟ ವರ್ಗದ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಇಂದು ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ರಾಜ್ಯ ವಾಲ್ಮೀಕಿ ನಿಗಮದ 94 ಕೋಟಿ ರೂಗಳ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಬೆಂಗಳೂರಿನಿಂದ ಎಂಟು ಜನರ ಇಡಿ ಅಧಿಕಾರಿಗಳ ತಂಡ ಇಲ್ಲಿನ ನೆಹರು ಕಾಲೋನಿಯಲ್ಲಿರುವ ನಾಗೇಂದ್ರ ಅವರ ಮನೆಗೆ ಮುಂಜಾನೆಯೇ ಆಗಮಿಸಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ
- ತರಕಾರಿ ತುಂಬಿದ ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
- ಏರ್ ಇಂಡಿಯಾ ವಿಮಾನ ದುರಂತ : ಗೋಕರ್ಣದಲ್ಲಿ ಪಿಂಡಪ್ರದಾನ
ನಾಗೇಂದ್ರ ಮತ್ತವರ ಮನೆಯವರು ಇಲ್ಲಿ ಇರದ ಕಾರಣ ಮನೆಯಲ್ಲಿನ ಸಿಬ್ಬಂದಿ ಮತ್ತು ಅವರ ಆಪ್ತರಿಂದ ಮಾಹಿತಿ ಸಂಗ್ರಹಿಸುತ್ತಿದೆ. ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ. ಸಿಆರ್ ಪಿಎಫ್ ಸಿಬ್ಬಂದಿಯಿಂದ ಭದ್ರತೆ ಪಡೆದು ದಾಳಿ ನಡೆಸಿದೆ.