suddibindu.in
ಕುಮಟಾ : ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹೊನ್ಮಂವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಪಕ್ಕದ ನದಿಯಲ್ಲಿ ಪಲ್ಟಿಯಾಗಿದೆ.
ಕುಮಟಾ ಕಡೆಯಿಂದ ಮಂಗಳೂರಿನ ಕಡೆ ಗ್ಯಾಸ್ ಟ್ಯಾಂಕರ್ ಚಲಿಸುತ್ತಿದ್ದು, ಈ ವೇಳೆ ಹೊನ್ಮಂವ್ ಕ್ರಾಸ್ ಬಳಿ ಹೋಗುತ್ತಿದ್ದ ವೇಳೆ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದು ನದಿಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾಗಿರುವುದರಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ತಕ್ಷಣ ಆತನಿಗೆ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ
- ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದುಬಾರಿ! KSRTC ಪ್ರಯಾಣಿಕರಿಗೆ ಮತ್ತಷ್ಟು ಹೊರೆ
- ಉತ್ತರ ಕನ್ನಡದಲ್ಲಿ ಅಕ್ರಮ ಮದ್ಯ ಮಾರಾಟ,ಓಸಿ ಜೂಜಾಟದ ವಿರುದ್ಧ ಪೊಲೀಸರ ದಾಳಿ! ಕಾರವಾರ,ಕುಮಟಾ,ಗೋಕರ್ಣ,ಮುಂಡಗೋಡದಲ್ಲಿ ಪ್ರತ್ಯೇಕ ಪ್ರಕರಣ
- ಬಸ್ ಪ್ರಯಾಣ ದರ ಹೆಚ್ಚಳ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೊರೆ: ರೂಪಾಲಿ ಎಸ್. ನಾಯ್ಕ ಖಂಡನೆ
ಅದೃಷ್ಟವಶಾತ್ ಖಾಲಿ ಟ್ಯಾಂಕರ್ ಆಗಿರುವುದರಿಂದ ಯಾವುದೇ ಸಮಸ್ಯೆ ಉಂಟಾಗಿಲ್ಲ.ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




