suddibindu.in
ಬೆಂಗಳೂರು : ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಸೇರಿದಂತೆ ಕಬಾಬ್ ಹಾಗೂ ಪಾನಿಪುರಿ ಬ್ಯಾನ್ ವಿಚಾರ ಸದ್ದು ಮಾಡಿದ ಬೆನ್ನಲ್ಲೇ ಇದೀಗ ಟೀ ಪೌಡರ್‌ನಲ್ಲಿ (tea powder) ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಮಾಡಲಾಗುತ್ತಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪೌಡರ್ ಬ್ಯಾನ್ ಮಾಡಲು ಸರ್ಕಾರ (Government) ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿಳುವ ಸಾಧ್ಯತೆ ಇದೆ.
ಇದನ್ನೂ ಓದಿ
- ಕುರ್ಕುರೆ ವಿಚಾರಕ್ಕೆ ಪೊಲೀಸರಿಗೆ ದೂರು ನೀಡಿದ ಬಾಲಕ..!
- Road Accident/ಸ್ಕೂಟಿ ಸವಾರನ ತಲೆಯ ಮೇಲೆ ಚಲಿಸಿದ ಬಸ್ ; ಸ್ಥಳದಲ್ಲೇ ಸಾವು
- ರಸ್ತೆ ಬದಿಯಲ್ಲಿ ಚಿರತೆ ಮರಿ ಪ್ರತ್ಯಕ್ಷ : ಶಿರಸಿ ತಾಲೂಕಿನ ಖಾನನಗರದಲ್ಲಿ ಅಪರೂಪದ ದೃಶ್ಯ.!
ರಾಜ್ಯದ ವಿವಿಧೆಡೆ ಟೀ ಪುಡಿ ಮಾದರಿ ಸಂಗ್ರಹಿಸಲಾಗಿತ್ತು. ಬೆಂಗಳೂರಿನಲ್ಲಿ ಸಂಗ್ರಹಿಸಿದ್ದ 49 ಟೀ ಪುಡಿ ಸ್ಯಾಂಪಲ್ಸ್ ಪೈಕಿ 45 ಟೀ ಪುಡಿ ಸ್ಯಾಂಪಲ್ಸ್ ಅಸುರಕ್ಷಿತವಾಗಿರುವುದು ಕಂಡು ಬಂದಿದೆ. ಪರಿಶೀಲನೆ ವೇಳೆ ಟೀ ಪೌಡರ್ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಚಹಾದ ಪೌಡರ್ ಬಣ್ಣ ಹೆಚ್ಚಿಸಲು ಟೀ ಬಣ್ಣ ಬರಲು ಕೆಮಿಕಲ್ ಬಣ್ಣಗಳ ಬಳಕೆ ಮಾಡಲಾಗಿತ್ತಿದೆ ಎಂಬ ಅಂಶ ಪತ್ತೆ ಆಗಿದೆ.
ಬೀದಿ ಬದಿಯ ಚಹಾ ಅಂಗಡಿಗಳಲ್ಲಿ ತೂಕ ಹೆಚ್ಚಿಸಲು ಟೀ ಪುಡಿಯಲ್ಲಿ ಮರದ ಪುಡಿ ಬಳಕೆ ಮಾಡುತ್ತಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಇನ್ನೂ ಇದರಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಟೀ ಪೌಡತ್ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಟೀ ಪೌಡರ್ ಬ್ಯಾನ್ ಮಾಡಲು ನಿರ್ಧರ ಮಾಡಿದೆ.