ನವದೆಹಲಿ:ಸೂಕ್ತ ಪರವಾನಿಗೆ ಇಲ್ಲ ಎನ್ನುವ ಆಪಾದನೆ ಮೇಲೆ ‘ಪವರ್ ಟಿವಿ’ ಸುದ್ದಿವಾಹಿನಿಯ ಪ್ರಸಾರ ಸ್ಥಗಿತಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ಹಿಡಿದಿದೆ.

ಹೈಕೋರ್ಟ್ ಪವರ್ ಟಿವಿ ಪ್ರಸಾರಕ್ಕೆ ತಡೆ ನೀಡಿರುವ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್, ಈ ವಿಚಾರದ ಕುರಿತಾಗಿ ನಾವು ಇನ್ನೇನೂ ಕೇಳಲು ಬಯಸುವುದಿಲ್ಲ. ಇದು ರಾಜಕೀಯ ದ್ವೇಷ ಇದಕ್ಕೆ ಕಾರಣ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.

ಮಾಧ್ಯಮದ ಧ್ವನಿಯನ್ನ ಹತ್ತಿಕ್ಕಬೇಕು ಎನ್ನುವ ಉದ್ದೇಶದಿಂದ ವಾಹಿನಿ ಪ್ರಸಾರಕ್ಕೆ ತಡೆ ಹಿಡಿಯಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ