suddibindu.in
ಕಾರವಾರ:
ಉತ್ತರಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಮಳೆ ಕಡಿಮೆಯಾಗಿದ್ದು, ಜನ ಜೀವನ ಸಹಜ ಸ್ಥಿತಿಯಯತ್ತ ಮರಳುತ್ತಿದೆ. ನಾಳೆ ಜಿಲ್ಲಾಧ್ಯಂತ ಯೆಲ್ಲೋ ಅಲರ್ಟ್ ಇರಲಿದೆ. ಇಷ್ಟು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಕಾರಣ ಶಾಲಾ ಕಾಲೇಜಿಗೆ ರಜೆ ನೀಡಲಾಗಿತ್ತು. ಆದರೆ ಇದೀಗ ಮಳೆ ಕಡಿಮೆ ಆಗಿರುವ ಕಾರಣ ಜಿಲ್ಲಾಧ್ಯಂತ ನಾಳೆ ಎಂದಿನಂತೆ ಶಾಲಾ ಕಾಲೇಜುಗಳು ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..