suddibindu.in
ಕಾರವಾರ : ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ವಿಡಿಯೋ ಸಾರ್ವಜನಿಕರಲ್ಲಿ ಅನಗತ್ಯ ಭಯ ಮತ್ತು ಆತಂಕ ಮೂಡಿಸಿದೆ.ಆದರೆ ಸೇತುವೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸ್ಪಷ್ಟ ಪಡಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾಡಳಿತವು ಕೂಡಲೇ ಈ ಬಗ್ಗೆ ತನಿಖೆ ನಡೆಸಿ ವಿವರವಾದ ವರದಿ ನೀಡುವಂತೆ ಐ.ಆರ್.ಬಿ. ಗೆ ಸೂಚಿಸಿದ್ದು, ಸಂಪೂರ್ಣ ಪರಿಶೀಲನೆಯ ನಂತರ ವೀಡಿಯೊದಲ್ಲಿ ತೋರಿಸಿರುವ ಪ್ರದೇಶವು ನಿರ್ಮಾಣ ಹಂತದಲ್ಲಿ ಕಾಂಕ್ರೀಟ್ ಸ್ಲರಿಯ ಅತಿಕ್ರಮಿಸುವಿಕೆ (Overlapping of concrete slurry)ಯಿಂದ ಆಗಿರುವುದು ಎಂದು ಐ.ಆರ್.ಬಿ ದೃಢಪಡಿಸಿದೆ. ಸೇತುವೆಗೆ ಸಂಬಂಧಿಸಿದಂತೆ ಯಾವುದೇ ರಚನಾತ್ಮಕ ಹಾನಿ ಇರುವ ಸಂಭವವಿರುವುದಿಲ್ಲ ಎಂದು ಐ.ಆರ್.ಬಿ ವರದಿ ನೀಡಿದೆ.
ಇದನ್ನೂ ಓದಿ
- ಗೋ ಕಳ್ಳತನ ಪ್ರಕರಣ ಬಯಲು: ಭಟ್ಕಳದಲ್ಲಿ ಇಬ್ಬರು ಆರೋಪಿ ಬಂಧನ
- ಗೋ ಕಳ್ಳತನ ಪ್ರಕರಣ ಬಯಲು: ಭಟ್ಕಳದಲ್ಲಿ ಇಬ್ಬರು ಆರೋಪಿ ಬಂಧನ
- ಸಿಎಂ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಗೆ ದಾಖಲು
ಸಾರ್ವಜನಿಕರಲ್ಲಿ ಅನಗತ್ಯ ಭಯ ಉಂಟುಮಾಡುವ ಯಾವುದೇ ವೀಡಿಯೊಗಳು ಅಥವಾ ಮಾಹಿತಿಯನ್ನು ಹಂಚಿಕೊಳ್ಳದಂತೆ ಅಥವಾ ಪ್ರಸಾರ ಮಾಡದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಸೂಚಿಸಿದೆ. ಇಂತಹ ತಪ್ಪು ಮಾಹಿತಿ ಹರಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.ಇದಲ್ಲದೆ, ಈ ವೀಡಿಯೊವನ್ನು ವೈರಲ್ ಮಾಡಲು ಕಾರಣರಾದವರನ್ನು ಜಿಲ್ಲಾಡಳಿತ ಸಕ್ರಿಯವಾಗಿ ಗುರುತಿಸುತ್ತಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.






