suddibindu.in
ಮುಂಡಗೋಡ : ತಾಲೂಕಿನಾದ್ಯಂತ ಸುರಿಯುತ್ತಿರುವ ನಿರಂತರ ಮಳೆಗೆ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ..
ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ.
ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಯ ಕಿಮ್ಸ್ ಗೆ ರವಾನಿಸಲಾಗಿದೆ. ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :83174 84063
ಇದನ್ನೂ ಓದಿ