ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಮತ್ತೆ ನಿಧಾನವಾಗಿ ಏರಿಕೆ ಆಗುತ್ತಿದೆ. ಬಹುತೇಕವಾಗಿ ಎಲ್ಲಾ ಮಾರುಕಟ್ಟೆಯಲ್ಲಿ ಚಿನ್ನದ ದರ ನಿನ್ನೆಗಿಂತ ಇಂದು ಏರಿಕೆಯಾಗತ್ತಿದೆ. ಇದರಿಂದಾಗಿ ಚಿನ್ನ ಖರೀದಿಸಲು ಜನ ಕೊಂಚ ಹಿಂದೇಟು ಹಾಕುವಂತಾಗಿದೆ.ಇಂದು ದೇಶದ ಹಲವು ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Rate)ದರ ಹೇಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ದೇಶದ ವಿವಿಧ ನಗರದಲ್ಲಿನ ಚಿನ್ನದ ಬೆಲೆ
ದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 67,310 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 73,410ರಲ್ಲಿ ಮುಂದುವರಿದಿದೆ.

ದೇಶದ ಇನ್ನೂಳಿದ ರಾಜ್ಯದಲ್ಲಿ ಹೇಗಿದೆ.?
ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 67,160 ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ರೂ. 73,260 ಮುಂದುವರೆದಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 67,160 ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ರೂ. 73,260 ಇದೆ.

ಚೆನ್ನೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 67,160 ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ರೂ. 73,260ರಲ್ಲಿ ಮುಂದುವರಿದಿದೆ. ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 67,160 ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ರೂ. 73,260ರಲ್ಲಿ ಮುಂದುವರಿದಿದೆ.

ಹೈದರಾಬಾದ್‌ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 67,160 ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ ರೂ. 73,260ರಲ್ಲಿ ಮುಂದುವರಿದಿದೆ.

ಬೆಳ್ಳಿ ಬೆಲೆ
ಇಂದು ಒಂದು ಕೆಜಿ ಲ ಬೆಳ್ಳಿ ರೂ. 100 ಇಳಿಕೆ ಕಂಡಿದೆ. ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಪುಣೆಯಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 88,400. ಚೆನ್ನೈ, ಕೇರಳ, ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ ಪ್ರತಿ ಕೆಜಿ ಬೆಳ್ಳಿಯ ಬೆಲೆ ರೂ. 93,400 ದರಲ್ಲಿ ಮಾರಾಟವಾಗುತ್ತಿದೆ.

ಇದನ್ನೂ ಓದಿ